Shakti Smart Card: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿತ್ತು. ಇದೀಗ ಸದ್ಯ ಅಧಿಕೃತ ಜಾರಿಗೆ ಆದೇಶವನ್ನು ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯ ಸರ್ಕಾರದ “ಶಕ್ತಿ ಯೋಜನೆ” ಯಡಿ ರಾಜ್ಯದ ಎಲ್ಲಾ ಮಹಿಳೆಯರು ಅಂದರೆ ಇದರಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಂದ್ರೆ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತಹ ಉದ್ದೇಶದಿಂದ ಈಗ ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಜೂನ್ 11 ರಿಂದ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ. ಆದೇಶದಲ್ಲಿ ಹೊಸದಾಗಿ ತೃತೀಯ ಲಿಂಗಿಗಳಿಗೂ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ವಿಶೇಷವಾಗಿದ್ದು, ಇದರ ಜತೆಗೆ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಯೋಜನೆ ರೂಪಿಸಲಾಗಿದೆ.
ಇದನ್ನೂ ಓದಿ: ಅಭಿಷೇಕ್ ಮದುವೆಗೆ ದರ್ಶನ್ ಯಾಕೆ ಬರಲಿಲ್ಲ!? ಮದುವೆಯ ಯಾವ ಕಾರ್ಯಕ್ಕೂ ದಚ್ಚು ನೋ ಎಂಟ್ರಿ?!
ಸೇವಾ ಸಿಂಧು ಮೂಲಕ ದೊರೆಯಲಿದೆ ಶಕ್ತಿ ಸ್ಮಾರ್ಟ್ ಕಾರ್ಡ್
ಉಚಿತ ಬಸ್ ಪ್ರಯಾಣಕ್ಕೆ ಈ ಮೊದಲು ಭಾರತ ಸರ್ಕಾರ, ಕರ್ನಾಟಕ ಸರ್ಕಾರದ ಇಲಾಖೆ, ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ನೋಡಿಕೊಂಡು ಬಸ್ ಕಂಡಕ್ಟರ್‌ಗಳು ಮಹಿಳೆಯರಿಗೆ ಶೂನ್ಯ ಟಿಕೆಟ್ ವಿತರಿಸಬೇಕು ಅಂತ ಆದೇಶದಲ್ಲಿ ತಿಳಿಸಿತ್ತು. ಆದ್ರೆ ಇದೀಗ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್(Shakti Smart Card) ನೀಡಬೇಕೆಂದು ರಾಜ್ಯ ಸರ್ಕಾರ ಸೂಚಿಸಿದ್ದು, ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಸಾರ್ವಜನಿಕರು ಸಂಬಂಧಪಟ್ಟ ಸಾರಿಗೆ ಇಲಾಖೆಗೆ ಸಲ್ಲಿಸಬೇಕು. ಅಂತೆಯೇ ಸಾರಿಗೆ ನಿಗಮ ಅರ್ಜಿಯನ್ನ ಪರಿಶೀಲಿಸಿ, ನಂತರ ಶಕ್ತಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಅಂತ ರಾಜ್ಯ ಸರ್ಕಾರವು ಆದೇಶದಲ್ಲಿ ಸಾರಿಗೆ ನಿಗಮಗಳಿಗೆ ಸೂಚಿಸಿದೆ. ಈ ಮೂರು ತಿಂಗಳ ಅವಧಿಯ ವರೆಗೂ ಈ ಮೊದಲೇ ಹೇಳಿದಂತೆ ಗುರುತಿನ ಚೀಟಿಗಳ ಆಧಾರದ ಮೇಲೆ ಶೂನ್ಯ ಟಿಕೆಟ್ ಗಳನ್ನ ನೀಡಬೇಕು.
ಇನ್ನು ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಅಡಿಯಲ್ಲಿ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು ಈಗಾಗ್ಲೇ ಯೋಜನೆಯ ಅನುಷ್ಠಾನಕ್ಕೆ ಸಿದ್ಧತೆಗಳು ನಡೀತಿವೆ. ಈ ಮಧ್ಯೆ ಈ ಯೋಜನೆಯ ಲಾಭವನ್ನು ಪಡೆಯಲು ಮಹಿಳೆಯರು ಶಕ್ತಿ ಸ್ಮಾರ್ಟ್ ಕಾಡ್ ಪಡೆಯಬೇಕಿದೆ ಅಂತ ರಾಜ್ಯ ಸರ್ಕಾರ ತನ್ನ ಅಧಿಕೃತ ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಮಹಿಳೆಯರು ಮೊದಲಿಗೆ ಸೇವಾಸಿಂಧು ಪೋರ್ಟ್ ನಲ್ಲಿ ಅರ್ಜಿಯನ್ನು ಸರ್ಕಾರದಿಂದ ಕರೆಯಲಾಗುತ್ತದೆ. ಆಗ ಅರ್ಜಿಯನ್ನು ಸಲ್ಲಿಸಿ, ಅಗತ್ಯವಾದ ದಾಖಲೆಗಳನ್ನ ನೀಡಿ ಅರ್ಜಿಯನ್ನ ಸಲ್ಲಿಸಬೇಕಾಗುತ್ತೆ. ನಂತರ ಸಂಬಂಧಪಟ್ಟ ಅಧಿಕಾರಿಗಳು ಅರ್ಜಿ ಪರಿಶೀಲನೆ ಮಾಡಿ ಸ್ಮಾರ್ಟ್ ಕಾರ್ಡ್ ನ್ನ ವಿತರಿಸುತ್ತಾರೆ ಅಂತ ಸರ್ಕಾರ ತಿಳಿಸಿದೆ. ಹೀಗಾಗಿ ಜೂನ್ 11ರ ನಂತರ ಉಚಿತ ಪ್ರಯಾಣವನ್ನ ಮಾಡಬಹುದು ಆದರೆ ರಾಜ್ಯ ಸರ್ಕಾರ ನೀಡಿರುವ ಗಡವಿನೊಳಗೆ ಅರ್ಜಿ ನಮೂನೆ ಬಿಟ್ಟಾಗ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಕಡ್ಡಾಯ ಅಂತ ಹೇಳಲಾಗ್ತಿದೆ.
ಇದನ್ನೂ ಓದಿ: ಗಿಚ್ಚಿ ಗಿಲಿಗಿಲಿ ಫಿನಾಲೆ ವೇದಿಕೆ ಮೇಲೆ ಎಂಗೇಜ್ಮೆಂಟ್ ಮಾಡಿಕೊಂಡ ಜಗಪ್ಪ ಹಾಗೂ ಸುಶ್ಮಿತಾ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram