ನೀವು SSLC ಅಥವಾ PUC ಪಾಸ್ ಆಗಿದ್ದೀರಾ? ಹಾಗಾದರೆ ನಿಮಗಿದೋ ಗುಡ್ ನ್ಯೂಸ್; ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಿಳಿಯೋಣ.

SSP Scholarship 2023-2024 : ವಿದ್ಯಾರ್ಥಿಗಳಿಗೆ ಸಹಾಯವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವೇತನವನ್ನು ಜಾರಿಗೊಳಿಸಲಾಗುತ್ತಿದೆ. ಈ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಅನ್ನ ಓದುತ್ತಿರುವವರು ಹಾಗೂ ಓದಿ ಮುಗಿಸಿದವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಬುದ್ಧಿವಂತ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಕೆಳಮಟ್ಟದಲ್ಲಿರುವವರಿಗೆ ಈ ವೇತನವನ್ನು ಪಡೆಯಬಹುದಾಗಿದೆ. ಹೌದು ನಮ್ಮ ದೇಶದಲ್ಲಿಎಷ್ಟೋ ಜನ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸಮಸ್ಯೆ ಕಾಡುತ್ತಿದೆ. ವಿದ್ಯಾರ್ಥಿಗಳು ಈ ವೇತನವನ್ನು ಪಡೆಯಲು, ವಿದ್ಯಾರ್ಥಿಗಳು ಈ ವೇತನವನ್ನು ಪಡೆದುಕೊಳ್ಳಲು ಎಸ್ ಎಸ್ ಪಿ (SSP Website) ವೆಬ್ಸೈಟ್ ಗೆ ಹೋಗಿ ಅಲ್ಲಿ ಅರ್ಜಿಯನ್ನ ಸಲ್ಲಿಸಬಹುದು.

WhatsApp Group Join Now
Telegram Group Join Now

ಕೆಲವು ಕಲಿಕೆಗೆ ಆಸಕ್ತಿ ಇದ್ದ ವಿದ್ಯಾರ್ಥಿಗಳಿಗೆ ಕಲಿಕೆಗೆ ಆರ್ಥಿಕ ನೆರವನ್ನು ಒದಗಿಸುವುದರ ಸಲುವಾಗಿ ಈ ಯೋಚನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯನ್ನು ಸಮಾಜ ಕಲ್ಯಾಣ ಇಲಾಖೆ ಬುಡಕಟ್ಟು ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಮಿಕ ಇಲಾಖೆ ಹಾಗೂ ಕೃಷಿ ಇಲಾಖೆಯವರು ಈ ಯೋಜನೆಯನ್ನು ಮಂಜೂರಾತಿಗೊಳಿಸಲಿದ್ದಾರೆ. ಈ ಯೋಜನೆಯ ಲಾಭವನ್ನು ಪಡೆಯುವವರು ಆರ್ಥಿಕವಾಗಿ ಹಿಂದುಳಿದವರಾಗಿರಬೇಕು ಮತ್ತು ಎಸ್ ಸಿ, ಎಸ್ ಟಿ ಹಾಗೂ ಒಬಿಸಿ ಅವರಂತೆ ಅಲ್ಪಸಂಖ್ಯಾತರಾಗಿರಬೇಕು. ಇನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಹಿಂದುಳಿದ ಸಮುದಾಯದವರಾಗಿರಬೇಕು. ಪಿಯುಸಿ ಅಥವಾ ಇನ್ನು ಯಾವುದೇ ತರಗತಿಗಳಲ್ಲಿ ಓದುತ್ತಿರಬೇಕು. ಬಾಲಕಿಯರಿಗೆ 30% ರಿಯಾಯಿತಿ ಇರುತ್ತದೆ. ವಿದ್ಯಾರ್ಥಿಯು ಕನಿಷ್ಠ 50% ಮಾರ್ಕ್ಸ್ ಅನ್ನು ಗಳಿಸಿರಬೇಕು. ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಮೀರಿರಬಾರದು. ಇನ್ನೊಂದು ಪ್ರಮುಖವಾದ ಅಂಶವೇನೆಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಬೇಕು ಅಂದರೆ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. ಇವಿಷ್ಟು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಮಾಹಿತಿಗಳು.

ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ವೇತನದ ಮಾಹಿತಿಗಳು ಈ ರೀತಿಯಲ್ಲಿವೆ: ಅರ್ಜಿಯನ್ನು ಸಲ್ಲಿಸುವವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು ಮತ್ತು ಒಂದರಿಂದ 10ನೇ ತರಗತಿಯಲ್ಲಿ ಯಾವುದಾದರೂ ಒಂದು ತರಗತಿಯಲ್ಲಿ ಓದುತ್ತಿರಬೇಕು. ಇವರ ವಾರ್ಷಿಕ ಆದಾಯವು ಒಂದು ಲಕ್ಷ ರೂಪಾಯಿಗಿಂತ ಹೆಚ್ಚು ಮೀರಿರಬಾರದು. ಇವಿಷ್ಟು ಅರ್ಹತೆಗಳು ಇದ್ದರೆ ಖಂಡಿತವಾಗಲೂ ಇವರು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಬೇಕಾದ ದಾಖಲೆಗಳು:

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಐಡಿ ಸಂಖ್ಯೆ, ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರಗಳು, ಕುಟುಂಬದ ಆದಾಯ ಪತ್ರ, ಈ ರೀತಿಯ ಎಲ್ಲ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅರ್ಜಿ ಸಲ್ಲಿಸುವವರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ssp.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ, ಹೋಂ ಪೇಜ್ ನಲ್ಲಿ ಲಭ್ಯವಿರುವ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ಮತ್ತು ಸಂಖ್ಯೆಯನ್ನು ನಮೂದಿಸಬೇಕು. ನಿಮ್ಮ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಹಾಗೂ ಅವರ ಫೋನ್ ನಂಬರನ್ನು ಹಾಕಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಮೊಬೈಲ್ಗೆ ಓಟಿಪಿ (OTP). ಬರುತ್ತದೆ. ಮತ್ತು ನೀವು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ನಿಮ್ಮ ಐಡಿ ಹಾಗೂ ಪಾಸ್ವರ್ಡ್ ಬರುತ್ತದೆ. ಅರ್ಜಿಯ ಪ್ರಕ್ರಿಯೆಯು ಇಲ್ಲಿಗೆ ಪರಿಪೂರ್ಣಗೊಳ್ಳುತ್ತದೆ. ನಿಮಗೆ ಬೇಕಾದಾಗ ಈ ಅಧಿಕೃತ ವೆಬ್ಸೈಟ್ನಲ್ಲಿ ಲಾಗಿನ್ ಆಗಬಹುದು ಮತ್ತು ಮಾಹಿತಿಯನ್ನ ಪಡೆದುಕೊಳ್ಳಬಹುದು.

ಇದನ್ನೂ ಓದಿ: ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಯಾವ ಯಾವ ದಾಖಲಾತಿಗಳು ಬೇಕು?

ಇದನ್ನೂ ಓದಿ: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram