ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ

New Scheme govt Employees

ಈಗಾಗಲೇ ನುಡಿದಂತೆ ನಡೆಯುತ್ತಾ ಇದ್ದೇವೆ ಎಂದು ಸಾರಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರಿಗೆ ಹೊಸ ಯೋಜನೆಗಳನ್ನು ಜಾರಿ ಮಾಡುವುದಾಗಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗಾದರೆ ರಾಜ್ಯ ಸರ್ಕಾರಿ ನೌಕರಿಗೆ ಯಾವ ಯಾವ ಹೊಸ ಯೋಜನೆಗಳನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

WhatsApp Group Join Now
Telegram Group Join Now

ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ ಯೋಜನೆಗಳು ಯಾವುವು?

ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಮರುಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯಿಂದ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಉಚಿತವಾಗಿ ವೈದ್ಯಕೀಯ ಸೇವೆ ಲಭ್ಯವಿದೆ. 2021 ರಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಈಗ ಮತ್ತೆ ಮರುಚಾಲನೆ ಸಿಕ್ಕಂತೆ ಆಗಿದೆ. ಇದರ ಜೊತೆಗೆ ನೌಕರರ ಬೇಡಿಕೆಯಂತೆ ಹಳೆ ಪಿಂಚನೆ ವ್ಯವಸ್ಥೆಯನ್ನು ಈಗಾಗಲೇ ಜಾರಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅದರ ಫಾರ್ಮ್ ತುಂಬಲು ಇಲಾಖೆಯಿಂದ ಆದೇಶವು ಬಂದಿದೆ. ಇದರ ಜೊತೆಗೆ 7 ನೇ ವೇತನ ಆಯೋಗದ ಜಾರಿಗೆ ತರುವುದಾಗಿ ರಾಜ್ಯ ಸರ್ಕಾರಿ ನೌಕರರಿಗೆ ಇನ್ನಷ್ಟು ವೇತನ ಸಿಗುವಂತೆ ಮಾಡಲಾಗಿದೆ.

ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು – ಸಿಎಂ ಸಿದ್ಧರಾಮಯ್ಯ ರಾಜ್ಯದಲ್ಲಿ ಒಟ್ಟು 7.50ಲಕ್ಷ ಹುದ್ದೆಗಳು ರಾಜ್ಯ ಸರ್ಕಾರಿ ಹುದ್ದೆಗಳು ಇವೆ. ಅದರಲ್ಲಿ 5.19 ಲಕ್ಷ ಹುದ್ದೆಗಳಲ್ಲಿ ಈಗಾಗಲೇ ನೌಕರರು ಇದ್ದರೆ. ಉಳಿದ 2.50ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಲಿದೆ. ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡುವ ಮೂಲಕ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯೂ ಇನ್ನಷ್ಟು ಬಲಿಷ್ಟ ಆಗಲಿದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವಾವ್ ಸ್ಕೂಟರ್ ಅಂದ್ರೆ ಇದು, ಇದರ ವೈಶಿಷ್ಟತೆಗಳನ್ನು ತಿಳಿದರೆ ಶೋರೂಮ್ ಮುಂದೆ ಕ್ಯೂ ನಿಲ್ತೀರಾ !

ಸರ್ಕಾರಿ ನೌಕರರ ಕಾರ್ಯ ವೈಖರಿಗೆ ಸಿಎಂ ಶ್ಲಾಘನೆ :-

ಸರ್ಕಾರ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಬೆಸೆಯುವ ಜವಾಬ್ದಾರಿ ಸರ್ಕಾರಿ ನೌಕರರಿಗೆ ಇದೆ. ನಾವು ಐದು ವರುಷ ಆಳುವ ಪಕ್ಷದಲ್ಲಿ ಇರುತ್ತೇವೆ ಆದರೆ ನೌಕರಿ ಸಿಕ್ಕ ದಿನದಿಂದ ನಿವೃತ್ತಿಯಾಗುವವರೆಗೂ ನೀವು ಜನರ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಿರಿ ಎಂದು ಸಿಎಂ ಸಿದ್ದರಾಮಯ್ಯ ಅವರು ನೌಕರರ ಕಾರ್ಯ ವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕರ್ನಾಟಕ 7 ಕೋಟಿ ಜನರ ಭಾವನೆಯನ್ನು ಅರ್ಥಮಾಡಿಕೊಂಡು ಸಾಮಾಜಿಕ ವ್ಯವಸ್ಥೆಯನ್ನು ಸರಿಯಾದ ಮಾರ್ಗದಲ್ಲಿ ನಡೆಸುವ ಹೊಣೆ ಹೊತ್ತು ಕೆಲಸ ಮಾಡುತ್ತೀರಿ. ಸಮಾಜದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ತರಬೇಕು ಅದಕ್ಕೆ ನಾವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು ಎಂಬ ಮಾತನ್ನು ಸ್ಪಷ್ಟವಾಗಿ ನೌಕರಿಗೆ ತಿಳಿಸಿದರು.

ಇದನ್ನೂ ಓದಿ: ಪ್ಯಾಸೆಂಜರ್ ರೈಲಿನ ದರದಲ್ಲಿ ಭಾರಿ ಇಳಿಕೆ . ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿಗೆ ಆಗುವ ನಿರೀಕ್ಷೆ

ಆರನೇ ವೇತನ ಆಯೋಗವನ್ನು ರಚಿಸಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸಿಗಬೇಕು

ಹಿಂದೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಆಯ್ಕೆ ಆದಾಗ ಆರನೇ ವೇತನ ಆಯೋಗವನ್ನು ರಚಿಸಿ ಆಯೋಗದ ಶಿಫಾರಸ್ಸಿನ ಮೇಲೆ 30 ಪ್ರತಿಶತ ಪಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂಪಯಿಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ್ದೆ. ಆ ಸಮಯದಲ್ಲಿ ನನ್ನ ವಿರುದ್ಧ ಆರೋಪಗಳು ಬಂದವು. ಆದರೂ ಆರನೇ ವೇತನ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರಿ ನೌಕರರಿಗೆ ಅವರ ಬೇಡಿಕೆಯನ್ನು ಈಡೇರಿಸಲು ಪ್ರಯತ್ನ ಪಟ್ಟಿದ್ದೆ. ಈಗ 7ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ ರಾಜ್ಯ ಸರ್ಕಾರಿ ನೌಕರರಿಗೆ 17 ಪ್ರತಿಶತ ವೇತನ ಹೆಚ್ಚು ಮಾಡಲಾಗಿದೆ. ವೇತನ ಆಯೋಗದ ಅಧ್ಯಕ್ಷರಾಗಿರುವ ಸುಧಾಕರ್ ಅಂತಿಮ ವರದಿಯನ್ನು ನೀಡಲು ಕಾಲಾವಕಾಶ ನೀಡಬೇಕು ಎಂದು ಮನವಿಯನ್ನು ಸಲ್ಲಿಸಿದ್ದಾರೆ. ಅದರಂತೆಯೇ ಬರುವ ಮಾರ್ಚ್ 15 ರವರೆಗೆ ಸಮಯವನ್ನು ನೀಡಿದ್ದೇವೆ. ಕೇಂದ್ರ ಚುನಾವಣೆಯ ನೀತಿ ಸಂಹಿತೆ ಜಾರಿ ಬರುವ ಮುನ್ನ ವರದಿ ಸಲ್ಲಿಸಲು ತಿಳಿಸಿದ್ದೇವೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನ ಟ್ರಾಫಿಕ್ ಪ್ರಾಬ್ಲೆಮ್ ಗೆ ಸುರಂಗ ಮಾರ್ಗ ಪರಿಹಾರ ಆಗುತ್ತದೆಯಾ?