ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಏಷ್ಟು ರೈತರಿಗೆ ಹಣ ಸಿಗುತ್ತದೆ?: ರಾಜ್ಯದ 33 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ. ಸಚಿವ ಕೃಷ್ಣ ಭೈರೇಗೌಡ ಮಾತನಾಡಿ ರಾಜ್ಯದ ಬರಗಾಲದ ಸ್ಥಿತಿ ಅನುಭವಿಸುತ್ತಾ ಇದೆ. ಬರ ನಿರ್ವಹಣೆಯ ಸಲುವಾಗಿ 2000 ಕೋಟಿ ಅನುದಾನ ನೀಡುವ ಅಗತ್ಯವಿದೆ. ಈಗ ಮೊದಲ ಹಂತದಲ್ಲಿ 628 ಕೋಟಿ ಬಿಡುಗಡೆ ಮಾಡಲಾಗಿದೆ. ಇದು 33 ಲಕ್ಷ ರೈತರ ಖಾತೆಗೆ ಜಮಾ ಆಗಲಿದೆ. ಇದರಲ್ಲಿ 1.6 ಲಕ್ಷ ರೈತರ ಬ್ಯಾಂಕ್ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಾ ಇದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ಖಾತೆಗೆ ಹಣ ಜಮಾ ಆಗಲಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಬರ ಪರಿಹಾರದ ಪಟ್ಟಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಿಗಲಿದೆ: ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಹಾಗೂ ಪಾರದರ್ಶಕ ವ್ಯವಸ್ಥೆಯ ಮೂಲಕ ಜನಸಂಪರ್ಕ ಕಲ್ಪಿಸುವ ಸಲುವಾಗಿ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬರ ಪರಿಹಾರದ ಹಣ ಜಮಾ ಆಗಿರುವ ರೈತರ ಹೆಸರಿನ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇದನ್ನು ಪರಿಶೀಲಿಸಿ ರೈತರು ಏನಾದರೂ ದೂರುಗಳು ಇದ್ದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಇಲಾಖಾ ಕಚೇರಿಗೆ ಭೇಟಿ ನೀಡಿ.
ರಾಜ್ಯದ ಹಲವೆಡೆ ನಡೆದಿದೆ ಬರ ಟಾಸ್ಕ್ ಫೋರ್ಸ್ ಸಭೆ:-
ರಾಜ್ಯದ ಒಟ್ಟು 223 ತಾಲೂಕು ಬರ ಪೀಡಿತ ಎಂದು ಗುರುತಿಸಲಾಗಿದೆ. ಕುಡಿಯುವ ನೀರು, ದನ ಕರುಗಳ ಮೇವು, ಹಾಗೂ ಮೂಲಭೂತ ಸೌಕರ್ಯಗಳನ್ನು ನಿರ್ವಹಣೆಗೆ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಖಾತೆಗೆ 870 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಪರಿಹಾರದ ಹಣ ನೇರವಾಗಿ ರೈತರಿಗೆ ಸಿಗುವಂತೆ ಮಾಡಬೇಕು ಎಂದು ಶಾಸಕರ ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯ ಇದೆ. ರಾಜ್ಯ ಸರ್ಕಾರವು ಇಲ್ಲಿಯವರೆಗೆ ರಾಜ್ಯದಲ್ಲಿ 431 ಟಾಸ್ಕ್ ಫೋರ್ಸ್ ಸಭೆ ನಡೆಸಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಸಚಿವ ಕೃಷ್ಣ ಭೈರೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯ ಸರ್ಕಾರವು 18,178 ಕೋಟಿ ರೂಪಾಯಿ ಅನುದಾನವನ್ನು ನೀಡಿ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ರಾಜ್ಯ ಸರ್ಕಾರದಿಂದ ಮನವಿ ಪತ್ರವನ್ನು ಕಳುಹಿಸಲಾಗಿದೆ. ಆದರೆ ಮನವಿ ಕಳಿಸಿ ನಾಲ್ಕು ತಿಂಗಳಾದರೂ ಬರ ಪರಿಹಾರ ಹಣ ಬಿಡುಗಡೆ ಆಗಲಿಲ್ಲ. ಆದಷ್ಟು ಬೇಗ ಕೇಂದ್ರ ಇದನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಿದರೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: TVS XL100 ಈ ಶಕ್ತಿಶಾಲಿ ಬೈಕ್‌ನ ವೈಶಿಷ್ಟತೆಗಳನ್ನು ಬಾಯಿ ಮಾತಿನಲ್ಲಿ ಹೇಳಿದರೆ ಸಾಲುವುದಿಲ್ಲ ಕಣ್ಣಾರೆ ನೀವೇ ನೋಡಿ.
ಇದನ್ನೂ ಓದಿ: ವಿಜಯಪುರ ನಗರದಲ್ಲಿ 93 ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನ