
ಇನ್ಮುಂದೆ ಭೂ ದಾಖಲೆಗಳು ಆಗಲಿವೆ ಡಿಜಿಟಲೀಕರಣ; ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಜಾರಿ
ರೈತರಿಗೆ ತಲೆ ನೋವು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದರಿಂದ ಸರ್ಕಾರ ಹಾಗೂ ರೈತರ ಸಮಯ ಹಣ ಎರಡು ಕೂಡ ಉಳಿತಾಯವಾಗಲಿದೆ. ಹೌದು ಸಾರ್ವಜನಿಕರಿಗೆ ತಮ್ಮ ಜಮೀನುಗಳ ದಾಖಲೆಗಳು ಯಾವುದೇ ಸಮಸ್ಯೆಗಳಿಲ್ಲದೆ ಸಿಗುವಂತೆ ಮಾಡಲು ರೆಕಾರ್ಡ್ ರೂಂಗಳಲ್ಲಿರುವ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಅಭಿಯಾನ ಆರಂಭಿಸಲಾಗುವುದು ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೆಕಾರ್ಡ್ ರೂಂ ನಲ್ಲಿರುವ ಹಳೆಯ ದಾಖಲೆಗಳು ಶಿಥಿಲಾವಸ್ತೆಯಲ್ಲಿವೆ. ಕೆಲವು…