ಬೆಂಗಳೂರು ಟ್ರಾಫಿಕ್ ಉಲ್ಲಂಘನೆ; ಟ್ರಾಫಿಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿ ವಾಹನ ನಿಲ್ಲಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಹುಷಾರ್!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೀವ್ರವಾಗಿ ಪರಿಹರಿಸಲು ಸಂಚಾರಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಈಗಾಗಲೇ ಜಾರಿಯಲ್ಲಿರುವ “ಸರ್ಕಸ್” ಕಾರ್ಯಾಚರಣೆಯ ಜೊತೆಗೆ, ಚಾಲಕರು ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಲ್ಲಿಸಿದರೆ ಅವರ ಮೇಲೆ ಕ್ರಮ ಜರುಗಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ನಿಯಮದ ಪ್ರಕಾರ, ಹೆಚ್ಚಿನ ಟ್ರಾಫಿಕ್ ಇರುವ ರಸ್ತೆಗಳಲ್ಲಿ ವಾಹನದ ಪೆಟ್ರೋಲ್ ಖಾಲಿಯಾಗಿ ನಿಂತುಹೋದರೆ, ಚಾಲಕನ ಮೇಲೆ ದಂಡ ವಿಧಿಸಲಾಗುತ್ತದೆ. ಸಂಚಾರ ಪೊಲೀಸ್ ಜಂಟಿ ಆಯುಕ್ತರ ಸ್ಪಷ್ಟನೆ: ಈ ಕಠಿಣ ಕ್ರಮಗಳ ಮೂಲಕ, ಟ್ರಾಫಿಕ್ ಜಾಮ್…