ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?
ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….