ಅತಿಥಿ ಉಪನ್ಯಾಸಕಾರ ವೇತನ ಹೆಚ್ಚಳಕ್ಕೆ ಸಿಎಂ ಅಸ್ತು; ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಾ ಗುಡ್ ನ್ಯೂಸ್
ಸಾಕಷ್ಟು ದಿನಗಳಿಂದ ವಿದ್ಯಾರ್ಥಿಗಳಿಗೆ ತಲೆನೋವಾಗಿದ್ದ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಹೌದು ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂಪಾಯಿಗಳಿಂದ 8000 ರೂಪಾಯಿಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಇನ್ನು ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ…