ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಜಾರಿ
ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹೊರಗುತ್ತಿಗೆ ಮೂಲಕ 449 ಮಂದಿಯನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲ ಬಾರಿಗೆ ಮೀಸಲಾತಿ ವ್ಯವಸ್ಥೆಯನ್ನು ತರುವುದಾಗಿ ಅವರು ನಿರ್ಧರಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು….