ಮಹಿಳಾ ಸಬಲೀಕರಣಕ್ಕೆ ಕೇಂದ್ರದಿಂದ ಮತ್ತೊಂದು ಹೆಜ್ಜೆ; ಯಾರಿಗೆಲ್ಲ ಉಚಿತ ಸಿಲಿಂಡರ್ ಸಿಗುತ್ತೆ? ಅರ್ಜಿ ಸಲ್ಲಿಸೋದು ಹೇಗೆ?
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ. ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇನ್ನು ಇದುವರೆಗೂ ಎಲ್.ಪಿ.ಜಿ(LPG) ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ…