ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?
2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24…