ಕರ್ನಾಟಕ ಸರ್ಕಾರಿ ನೌಕರರಿಗೆ ಫೆಬ್ರವರಿ ತಿಂಗಳ ಕೊನೆಯಲ್ಲಿ ಎರಡು ದಿನ ವಿಶೇಷ ರಜೆ

Karnataka government employees

ಸರ್ಕಾರಿ ನೌಕರರಿಗೆ ಸಾಮಾನ್ಯವಾಗಿ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳು, ಹಾಗೂ ಸ್ಥಳೀಯ ರಜೆಗಳು ಇರುತ್ತವೆ. ಇಂತಹ ರಜೆಗಳಿಗೆ ಇವರ ಸಂಬಳದಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದರೆ ಕೆಲವು ವಿಶೇಷ ಸಂದರ್ಭದಲ್ಲಿ ಸರ್ಕಾರವೇ ವಿಶೇಷ ರಜೆಯನ್ನು ಘೋಷಣೆ ಮಾಡುತ್ತದೆ. ಆಗಲೂ ಸಹ ಸರ್ಕಾರಿ ನೌಕರರು ಪೂರ್ಣ ಸಂಬಳ ಪಡೆಯುತ್ತಾರೆ. ಈಗ ರಾಜ್ಯ ಸರ್ಕಾರವು ಇದೆ ತಿಂಗಳ ಕೊನೆಯ ವಾರದಲ್ಲಿ ಎರಡು ದಿನ ವಿಶೇಷ ರಜೆಯ ಸುತ್ತೋಲೆಯನ್ನು ಹೊರಡಿಸಿದೆ. ಹಾಗಾದರೆ ಯಾಕೆ ವಿಶೇಷ ರಜೆ ನೀಡಿದೆ ಎಂಬುದನ್ನು ತಿಳಿಯೋಣ.

WhatsApp Group Join Now
Telegram Group Join Now

ಯಾರಿಗೆ ಸರ್ಕಾರದಿಂದ ಸುತ್ತೋಲೆ ಕಳುಹಿಸಲಾಗಿದೆ: ವಿಮಲಾಕ್ಷಿ. ಬಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರು ಫೆಬ್ರುವರಿ 15 2024 ರಂದು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ವಿಶೇಷ ರಜೆಯ ಸುತ್ತೋಲೆಯನ್ನು ಕಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುತ್ತೋಲೆಯ ವಿವರ :- 27 ಮತ್ತು 28 ಫೆಬ್ರವರಿ 2024 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಮತ್ತು ಆಡಳಿತದಲ್ಲಿ ಭಾಗವಹಿಸಲು ಇಚ್ಛಿಸುವ ರಾಜ್ಯ ಸರ್ಕಾರಿ ನೌಕರರಿಗೆ ಈ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದೆ.

ಇದನ್ನೂ ಓದಿ: ಗ್ಲೋಬಲ್ NCAP ನಲ್ಲಿ 5-ಸ್ಟಾರ್ ರೇಟಿಂಗ್ ಅನ್ನು ಹೊಂದಿರುವ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಮಕ್ಕಳು ಮತ್ತು ವಯಸ್ಕರರಿಗೆ ಹೇಳಿ ಮಾಡಿಸಿದ್ದು

ಏಷ್ಟು ದಿನಗಳ ರಜೆ ಪ್ರಕಟಿಸಿದೆ?

ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ ಅಥವಾ ನೌಕರರಿಗೆ 27-02-2024 ರಂದು ರಜೆ ನೀಡಲಾಗಿದೆ. ಹೊರತು ಪಡಿಸಿ ಹೊರ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಬರುವ ಅಧಿಕಾರಿಗಳಿಗೆ ಮತ್ತು ನೌಕರರಿಗ 27-02-2024 ಹಾಗೂ 28-02- 2024 ಎರಡು ದಿನಗಳು ರಜೆ ಘೋಷಣೆ ಮಾಡಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಮಾತ್ರ ಇದು ಅನ್ವಹಿಸುತ್ತದೆ. ಯಾವುದೇ ಬೇರೆ ಕಾರಣಗಳಿಗೆ ರಜೆ ಪಡೆದರು ಅದು ನೌಕರರ ವಯಕ್ತಿಕ ರಜೆ ಆಗುತ್ತದೆ.

ವಿಶೇಷ ರಜೆಗೆ ಕೆಲವು ನಿಯಮಗಳನ್ನು ಸುತ್ತೋಲೆಯಲ್ಲಿ ಪ್ರಕಟಣೆ ಮಾಡಲಾಗಿದೆ. ನಿಯಮಗಳು ಏನೆಂದರೆ ಸಮ್ಮೇಳನದಲ್ಲಿ ಭಾಗವಹಿಸಲು ಬಯಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಬೇಕು ಎಂಬ ಕೋರಿಕೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ನೀಡಬೇಕು. ಹಾಗೂ ಸಮ್ಮೇಳನಕ್ಕೇ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು. ಇವೆರಡೂ ಪತ್ರಗಳನ್ನು ಪರಿಶೀಲಿಸಿ ವಿಶೇಷ ರಜೆಯನ್ನು ಮಂಜೂರು ಮಾಡಲಾಗುತ್ತದೆ.

ಫೆಬ್ರವರಿ 14ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದ ಪೂರ್ವಭಾವಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಸಭೆ ನಡೆಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮುಖ್ಯಮಂತ್ರಿಗಳಿಗೆ ಆಹ್ವಾನ :-

ಫೆಬ್ರವರಿ 27ರಂದು ನಡೆಯುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೇ ಭಾಗವಹಿಸುವಂತೆ ಹಣಕಾಸು ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ಕರೆಯೋಲೆ ನೀಡಲಾಗಿದೆ. ಸರ್ಕಾರಿ ನೌಕರರ ಮಹಾ ಸಮ್ಮೇಳನವು ಫೆಬ್ರವರಿ 27 2024 ಮಂಗಳವಾರದಂದು ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ, ಕೃಷ್ಣ ವಿಹಾರದಲ್ಲಿ ನಡೆಯಲಿದೆ. ಈ ಸಮ್ಮೇಳನಕ್ಕೆ ರಾಜ್ಯದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಸಚಿವರು ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಸರ್ಕಾರಿ ನೌಕರರು ಸರ್ಕಾರಕ್ಕೇ ಹಲವು ಪ್ರಮುಖ ಬೇಡಿಕೆಗಳನ್ನು ಕೋರಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಉದ್ಘಾಟನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದಲ್ಲಿ ಯಾವ ಘೋಷಣೆ ಮಾಡಲಿದ್ದಾರೆ ಎಂದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ 14 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇವೆ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ…