ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಬಜೆಟ್ನ್ನು ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿದ್ದಾರೆ. ಇದರಲ್ಲಿ ಮಹಿಳೆಯರ ಆರ್ಥಿಕವಾಗಿ ಸ್ವವಲಂಬನೆ ಹಿತ ದೃಷ್ಟಿಯಿಂದ ಅಂದ್ರೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢ ರನ್ನಾಗಿಸುವ ಆಲೋಚನೆಯಿಂದಾಗಿ ಮತ್ತೊಂದು ಹೆಜ್ಜೆಯನ್ನ ಈ ಬಜೆಟ್ ನಲ್ಲಿ ಮಹಿಳೆಯರ ಪರವಾಗಿ ಇಡಲಾಗಿದೆ. ಹೌದು ಉದ್ಯಮ ಶಕ್ತಿ ಎಂಬ ಯೋಜನೆ(Udyama Shakti Scheme) ಅಡಿಯಲ್ಲಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ. ಹೌದು ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ನ್ನು ಸಿಎಂ ಸಿದ್ಧರಾಮಯ್ಯ ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಇನ್ನು ಈ ಭಾರಿಯ ಬಜೆಟ್‌ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.
ಇನ್ನು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಉದ್ಯಮ ಶಕ್ತಿ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ ಅಂತ ಸ್ವತಃ ಲಕ್ಷ್ಮೀ ಹೆಬಾಳ್ಕರ್ ಅವ್ರೆ ತಿಳಿಸಿದ್ದಾರೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ನಾರಿ ಶಕ್ತಿಯೇ ನವಶಕ್ತಿ ಹೊಸದಾಗಿ ಶುರುವಾಗಲಿದೆ ಉದ್ಯಮ ಶಕ್ತಿ
ಹೌದು ಸ್ತ್ರೀ ಶಕ್ತಿಯಿಂದಲೇ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯುತ್ತಿದ್ದು, ಈ ಸಲದ ಕರ್ನಾಟಕ ಬಜೆಟ್‌ನಲ್ಲಿ ಉದ್ಯಮ ಶಕ್ತಿ ಯೋಜನೆಯನ್ನು ಘೋಷಿಸಿ ಗಮನಸೆಳೆದಿದ್ದಾರೆ. ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಉದ್ಯಮ ಶಕ್ತಿ ಹೆಸರಲ್ಲಿ ಯೋಜನೆಯನ್ನು ಜಾರಿಗೊಳಿಸಲಿದೆ. ಇದರ ಮೂಲಕ ರಾಜ್ಯದ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಲಾಗುತ್ತದೆ. ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಅವುಗಳ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಇನ್ನುಳಿದಂತೆ ಉದ್ಯಮ ಶಕ್ತಿ ಯೋಜನೆಗೆ ಪೆಟ್ರೋಲಿಯಂ ಕಂಪನಿಗಳ ಸಹಯೋಗ ಇರುವ ಕಾರಣ, ಪೆಟ್ರೋಲ್ ಬಂಕ್ ಸ್ಥಾಪನೆಗೆ ಬೇಕಾದ ಹಣವನ್ನು ಆಯಾ ಕಂಪನಿಗಳೇ ಹೂಡಿಕೆ ಮಾಡಲಿವೆ. ರಾಜ್ಯ ಸರ್ಕಾರ ಇದಕ್ಕೆ ಪೂರಕವಾಗಿ ಪೆಟ್ರೋಲ್ ಬಂಕ್ ಸ್ಥಾಪನೆಗೆ ಬೇಕಾದ ಭೂಮಿಯನ್ನು ಒದಗಿಸಲಿದೆ ಅಂತ ಹೇಳಲಾಗಿದೆ. ಇನ್ನುಳಿದಂತೆ, ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಉದ್ಯಮಶೀಲತೆಯನ್ನು ಹೆಚ್ಚಿಸಲು, ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿಯನ್ನು ಸರ್ಕಾರ ನೀಡಲಿದೆ. ಇದರ ಜತೆಗೆ ಪೆಟ್ರೋಲ್ ಬಂಕ್‌ಗೆ ಬೇಕಾದ ಪರವಾನಗಿ ಮತ್ತು ಪೂರಕ ಬೆಂಬಲವನ್ನೂ ರಾಜ್ಯ ಸರ್ಕಾರವೇ ನೀಡಲಿದೆ ಅಂತ ವಿವರಿಸಿದ್ರು. ಇನ್ನು ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನ ಸಹ ಹಂಚಿಕೊಂಡಿದ್ದಾರೆ.
ಹೌದು ಈ ಬಗ್ಗೆ ಸ್ವತಃ ಲಕ್ಷ್ಮೀ ಹೆಬಾಳ್ಕರ್ ಅವ್ರೆ facebook ಖಾತೆಯಲ್ಲಿ ವಿಷಯ ತಿಳಿಸಿದ್ದು, ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಕೈಗೊಳ್ಳುವುದಾಗಿ ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ ಅಂತ ತಿಳಿಸಿದ್ದಾರೆ. ಇನ್ನು ಇದನ್ನ ನೋಡಿದ ಪ್ರತಿಯೊಬ್ಬರೂ ಕೂಡ ಯೋಜನೆಯ ಅನುಷ್ಠಾನದ ಕುರಿತು ಹರ್ಷ ವ್ಯಕ್ತಪಡಿಸಿದ್ದು, ಒಳ್ಳೆಯ ಯೋಜನೆ ಅಂತ ಕಮೆಂಟ್ಸ್ ಮಾಡಿ ಶುಭ ಹಾರೈಸುತ್ತಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ ರಾಜ್ಯ ಸರ್ಕಾರ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಿಗಲಿದೆ 10ಸಾವಿರ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?ಸಂಪೂರ್ಣ ಮಾಹಿತಿ ಇಲ್ಲಿದೆ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram