ಸರ್ಕಾರಿ ಕೆಲಸ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ. ಉದ್ಯೋಗದ ಭದ್ರತೆಯ ಜೊತೆಗೆ ಉತ್ತಮ ಸಂಬಳ ಸಿಗುವ ಕೆಲಸ ಸಿಕ್ಕಿದರೆ ಸಾಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಸುತ್ತಲೂ ಇರುವವರು ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಈ ಲೇಖನದಲ್ಲಿ ನೋಡೋಣ.
ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ :- ಉತ್ತರ ಕನ್ನಡ ಜಿಲ್ಲೆಯ ತಾಲೂಕು ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹುದ್ದೆ, ಬೆರಳಚ್ಚುಗಾರರು ಹಾಗೂ ನಕಲು ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಇಲಾಖೆ ಮುಂದಾಗಿದ್ದು, ಅರ್ಜಿಗಳ ನೇಮಕಾತಿಯ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಖಾಲಿ ಇರುವ ಹುದ್ದೆಗಳ ಸಂಖ್ಯೆ :-
- ಆದೇಶ ಜಾರಿಕಾರರು:- 20 ಹುದ್ದೆಗಳು.
- ನಕಲು ಬೆರಳಚ್ಚುಗಾರರು :- 3 ಹುದ್ದೆಗಳು.
- ಬೆರಳಚ್ಚುಗಾರರು:- 3 ಹುದ್ದೆಗಳು.
ಮಾಸಿಕ ವೇತನದ ವಿವರಗಳು :- ಆದೇಶ ಜಾರಿಕಾರ ಹುದ್ದೆಗೆ ಮಾಸಿಕ ವೇತನ 19,950 ರೂಪಾಯಿ ಇಂದ 37,900 ರೂಪಾಯಿ. ನಕಲು ಬೆರಳಚ್ಚುಗಾರ ಹುದ್ದೆಗೆ ಮಾಸಿಕ ವೇತನ 21,400 ರೂಪಾಯಿಯಿಂದ 42,000 ರೂಪಾಯಿ ಹಾಗೂ ಬೆರಳಚ್ಚುಗಾರ ಹುದ್ದೆಗೆ ಮಾಸಿಕ ವೇತನ 21,400 ರೂಪಾಯಿಯಿಂದ 42,000 ರೂಪಾಯಿ . ಇದು ಆರಂಭಿಕ ವೇತನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: PPF ಹಾಗೂ SSY ಯೋಜನೆಗಳಲ್ಲಿ ಯಾವ ಯೋಜನೆಯಲ್ಲಿ ಹೆಚ್ಚು ಲಾಭವನ್ನು ಗಳಿಸಬಹುದು.
ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು?
- ಬೆರಳಚ್ಚುಗಾರ ಹುದ್ದೆಗೆ :- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು ಇಲ್ಲವೇ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಡಿಯಲ್ಲಿ ನಡೆಯುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
- ಆದೇಶ ಜಾರಿಕಾರರ ಹುದ್ದೆಗೆ :- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಇಲ್ಲವೇ ತತ್ಸಮಾನ ಶಿಕ್ಷಣ ಪಡೆದಿರಬೇಕು. ಇದರ ಜೊತೆಗೆ ವಾಹನ ಚಾಲನ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ವಯಸ್ಸಿನ ಮಿತಿ :- ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ ವಯಸ್ಸು 35. ಸರ್ಕಾರಿ ಮೀಸಲಾತಿ ನಿಯಮದ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿರುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಹಾಗೂ ಹಿಂದುಳಿದ ವರ್ಗ ಕ್ಕೆ ಸೇರಿದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ ಆಗಿರುತ್ತದೆ.
ಅರ್ಜಿ ಶುಲ್ಕದ ಮಾಹಿತಿ :-
ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300 ರೂಪಾಯಿ ಆಗಿದೆ. ಹಾಗೂ 2A ಮತ್ತು 2B ಹಾಗೂ 3A ಮತ್ತು 3B ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 150 ರೂಪಾಯಿ ಹಾಗೂ ಎಸ್‌ಸಿ ಹಾಗೂ ಎಸ್‌ಟಿ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂಪಾಯಿ ಆಗಿರುತ್ತದೆ. 20-07-2024 ರ ಒಳಗಾಗಿ ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ :- ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-07-2024 ಆಗಿರುತ್ತದೆ. ಅರ್ಜಿ ಸಲ್ಲಿಸಲು https://uttarakannada.dcourts.gov.in/ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯಲ್ಲಿ ನಿಮ್ಮ ವೈಯಕ್ತಿಕ ಹಾಗೂ ವಿದ್ಯಾರ್ಹತೆ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಾರದೆ ಇದ್ದರೆ ಹೀಗೆ ಮಾಡಿ ..