ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬರೋಬ್ಬರಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಮುಂದಾಗಿದ್ದು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಹುದ್ದೆಯ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಓದಿ.
ಹುದ್ದೆಯ ಬಗ್ಗೆ ಮಾಹಿತಿ :- ಖಾಲಿ ಇರುವ ಮೂಲ ವೃಂದ ಹಾಗೂ ಕರ್ನಾಟಕ ಉಳಿಕೆ ವೃಂದದಲ್ಲಿರುವ 1000 ಗ್ರಾಮ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಶೈಕ್ಷಣಿಕ ಅಹತೆಯು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗೆ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 21,400 ರೂ. ಇಂದ 42,000 ರೂ. ಆಗಿರುತ್ತದೆ.
ವಯಸ್ಸಿನ ಮಿತಿ :- ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 18 ವರ್ಷದ ಹಾಗು ಗರಿಷ್ಠ ಮಿತಿ ಜಾತಿ ಅನುಗುಣವಾಗಿ ಬೇರೆ ಬೇರೆ ರೀತಿಯಾಗಿ ಇದೆ. ಸರ್ಕಾರದ ನಿಯಮದ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಹಾಗೂ ಪ್ರವರ್ಗ 2ಎ ಮತ್ತು 2ಬಿ ಮತ್ತು 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯಸ್ಸು ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಮೊದಲು ಈ ಅಂಶಗಳನ್ನು ನೆನಪಿಡಿ :-
1) ಗ್ರಾಮ ಅಧಿಕಾರಿ ಆಡಳಿತ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಬಳಿಕ ಶುಲ್ಕದ ಮಾಹಿತಿಯನ್ನು ನೀವು ನಿಮ್ಮ ಅರ್ಜಿ ಸಂಖ್ಯೆ ಮತ್ತು ಶುಲ್ಕ ಪಾವತಿಸಿದ ವಿವರಗಳನ ಜೊತೆಗೆ [email protected] ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ನೀವು ಶುಲ್ಕ ಪಾವತಿಸಿದ ವಿವರಗಳನ್ನು ಇ-ಮೇಲ್ ಮೂಲಕ ಇಲಾಖೆಗೆ ಕಳುಹಿಸಿದ 2 ದಿನಗಳ ಒಳಗಾಗಿ ಅರ್ಜಿಯನ್ನು ಮುದ್ರಿಸಲಾಗಿದೆ ಎಂದು ಟಿಪ್ಪಣಿ ಮೂಲಕ ಅಭ್ಯರ್ಥಿಗಳಿಗೆ ಇಲಾಖೆಯ ವತಿಯಿಂದ ಮೇಲ್ ಬರುತ್ತದೆ.
VAO ಶುಲ್ಕ ಪಾವತಿಗೆ ಪರಿಹಾರ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ನಂತರವೂ ಪಾವತಿ ಬಗ್ಗೆ ಅಪ್ ಡೇಟ್ ಆಗದಿದ್ದರೆ ಈ ವಿಳಾಸಕ್ಕೆ ಇ-ಮೇಲ್ ([email protected]) ಮಾಡುವುದು. ಅದಾದ ಎರಡು ದಿನಗಳ ನಂತರ ಆಪ್ ಡೇಟ್ ಆಗಲಿದೆ. ಬಳಿಕ ಅದರ ಪ್ರಿಂಟ್ ತೆಗೆದುಕೊಳ್ಳಬಹುದು.@CMofKarnataka— KEA (@KEA_karnataka) April 30, 2024
2) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅನುಮತಿ ಇರುತ್ತದೆ. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಾರದು.
3) ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾರಣಕ್ಕೂ ಎಡಿಟ್ ಮಾಡುವ ಅವಕಾಶಗಳು ಇರುವುದಿಲ್ಲ. ಅರ್ಜಿ ಸಲ್ಲಿಸುವಾಗ ನೀವು ಮತ್ತೊಮ್ಮೆ ನಿಮ್ಮ ವಿವರಗಳನ್ನು ಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು.
4) ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿ ಅಥವಾ ಸುಳ್ಳು ಮಾಹಿತಿ ನೀಡಬಾರದು. ತಪ್ಪು ಮಾಹಿತಿ ನೀಡಿದರೆ ನಿಮ್ಮ ವಿರುದ್ಧ ಇಲಾಖೆ ಯಾವುದೇ ರೀತಿಯ ಕ್ರಮ ಕೈಗೊಳ್ಳಬಹುದು. ಹಾಗೂ ನಿಮ್ಮ ಅರ್ಜಿ ತಿರಸ್ಕಾರ ಆಗುತ್ತದೆ.
5) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಫೇಕ್ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿದರೆ ಅದು ಮಾನ್ಯ ಇಲ್ಲ.
6) ಅಭ್ಯರ್ಥಿಯ ಅರ್ಜಿ ಸಲ್ಲಿಸುವಾಗ ಹುದ್ದೆಯ ಬಗ್ಗೆ ಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹಾಗೂ ಇಲಾಖೆ ಸೂಚಿಸಿದ ಷರತ್ತು ಮತ್ತು ನಿಯಮಗಳ ಅನುಸಾರವಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಸ್ವಿಫ್ಟ್ 2024: ಹೊಸ ಲುಕ್, ಹೊಸ ಎಂಜಿನ್, ಹೊಸ ಚಾಲನಾ ಅನುಭವ ರೂ.11,000 ಗೆ ಬುಕ್ ಮಾಡಿ!