ಅಂಗನವಾಡಿಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶ ಅಂತಲೇ ಹೇಳಬಹುದು. ಹೌದು ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಅಂಗನವಾಡಿ ಟೀಚರ್, ಮಿನಿ ಅಂಗನವಾಡಿ ಟೀಚರ್ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇನ್ನು ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು ರೂರಲ್, ತುಮಕೂರು ಅರ್ಬನ್ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬಹುದು. ಇನ್ನು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವಾಗ
ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದ್ದು, ಹೀಗಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೌದು ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅಪ್ಲಿಕೇಷನ್ ಸಲ್ಲಿಸಬೇಕು. ಹೀಗಾಗಿ ಅಪ್ಲಿಕೇಶನ್ ತೆಗೆದುಕೊಂಡು ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಅಂದ್ರೆ ಈಗ ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನ ಭರ್ತಿ ಮಾಡಿ, ನಂತರ ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ ಅದಾದ ಬಳಿಕ ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ, ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿದ ನಂತರ ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬೇಕು. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಅರ್ಹ ಅಭ್ಯರ್ಥಿಗಳು ಅಂದ್ರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು ಅಂತ ತಿಳಿಸಲಾಗಿದೆ. ಇದರ ಜೊತೆಗೆ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇನ್ನು ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೀಗಾಗಿ ಅರ್ಹರು ಮತ್ತು ಅವಶ್ಯಕತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಜನವರಿ 10, 2024 ಅಂದ್ರೆ ನಿನ್ನೆಯಿಂದಲೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 05, 2024 ಕೊನೆಯ ದಿನಾಂಕವಾಗಿದ್ದು ಯಾವುದೇ ಅರ್ಜಿ ಶುಲ್ಕ ಇಲ್ಲದೆ ಅರ್ಜಿ ಸಲ್ಲಿಸಬಹುದು.
ಅಧಿಸೂಚನೆ PDFಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: 3000 ರೂ.ಗಳ ರಿಯಾಯಿತಿಯೊಂದಿಗೆ Realme C 53, ವೈಶಿಷ್ಟ್ಯಗಳನ್ನು ನೋಡಿದರೆ ಇವತ್ತೇ ಖರೀದಿಸುತ್ತೀರಾ
ಇದನ್ನೂ ಓದಿ: PM Kissan Yojana : ಮಹಿಳಾ ರೈತರಿಗೆ ಹಣದ ಸಹಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವ ಸರ್ಕಾರ