ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಲಿದ್ದಾರೆ, ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲಾತಿ ಬೇಕು, ಅರ್ಜಿ ಸಲ್ಲಿಸುವ ಕುರಿತು ಹೆಚ್ಚಿನ ಮಾಹಿತಿ ನೋಡ್ತಾ ಹೋಗೋಣ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಎಲ್ಲಿ? ಯಾವಾಗ? ಹೇಗೆ ಅರ್ಜಿ ಸಲ್ಲಿಸೋದು? ಯಾರು ಅರ್ಹರು ಗೊತ್ತಾ?
ಹೌದು ಕಾಂಗ್ರೆಸ್ ಚುನಾವಣೆಗೆ ಮೊದಲು ಮತದಾರರಿಗೆ ಪಂಚ ಗ್ಯಾರಂಟಿಗಳನ್ನು ನೀಡಿತ್ತು. ಚುನಾವಣೆಯಲ್ಲಿ ಗೆದ್ದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ, 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ, ಪ್ರತಿ ಮನೆಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಹಾಗೂ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2000 ರೂಪಾಯಿ ಡಿಬಿಟಿ ಮಾಡುವ ಗೃಹಲಕ್ಷ್ಮಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಇನ್ನು ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದು ಹಿಂದೆಯೇ ಘೋಷಿಸಲಾಗಿತ್ತು. ಇದೀಗ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ದಿನಾಂಕವನ್ನು ಪ್ರಕಟಿಸಲಾಗಿದೆ.
ಯುವ ನಿಧಿ ಮೂಲಕ ರಾಜ್ಯದ 5 ಲಕ್ಷ ನವ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೊಮಾ ಹೋಲ್ಡರ್‌ಗಳಿಗೆ ನೇರವಾಗಿ ಹಣ ತಲುಪಲಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವೀಧರರಾದವರಿಗೆ ಮಾಸಿಕ 3000 ರೂಪಾಯಿ, ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ. ಫಲಾನುಭವಿಗಳು ಪ್ರತಿ ತಿಂಗಳ 25ರೊಳಗೆ ಸ್ವಯಂಘೋಷಣೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಬಹುದು. ಸ್ವಂತ ಉದ್ಯೋಗ ಆರಂಭಿಸಿದರೆ, ಉದ್ಯೋಗ ಸಿಕ್ಕರೆ ಭತ್ಯೆ ಪಡೆಯುವಂತಿಲ್ಲ. ಐಟಿ- ಜಿಎಸ್‌ಟಿ ನೋಂದಣಿ, ಇಎಸ್‌ಐ- ಪಿಎಫ್ ಮಾಹಿತಿಯಿಂದಲೂ ಉದ್ಯೋಗ ಪಡೆದಿರುವ ಬಗ್ಗೆ ಮಾಹಿತಿ ಸಿಗಲಿದೆ. ಜತೆಗೆ ಶೇ.5ರಷ್ಟು ಭೌತಿಕ ಪರಿಶೀಲನೆಯೂ ನಡೆಯಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅನರ್ಹರು ಪಡೆದ ಅಷ್ಟು ಮೊತ್ತವನ್ನು ವಾಪಾಸ್ ಪಡೆಯುವ ಜತೆಗೆ ಕಾನೂನು ಕ್ರಮವೂ ಆಗಲಿದ್ಯಂತೆ.
ಇನ್ನು ಯುವ ನಿಧಿ ನಿರುದ್ಯೋಗ ಭತ್ಯೆ ಯಾರಿಗೆ ಎಷ್ಟು ಸಿಗುತ್ತೆ ಅಂತ ಮೊದಲಿಗೆ ನೋಡೋದಾದ್ರೆ ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ, ಡಿಪ್ಲೊಮೋ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ ಸಿಗಲಿದೆ. ಎಲ್ಲಿಯವರೆಗೆ ಸಿಗಲಿದೆ ಭತ್ಯೆ ಅಂದ್ರೆ 2 ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ ಸಿಗಲಿದೆ. ಮುಖ್ಯವಾಗಿ ಯುವನಿಧಿ ಯೋಜನೆಗೆ ಬೇಕಿರುವ ದಾಖಲೆಗಳು ಏನಪ್ಪಾ ಅಂದ್ರೆ ಪದವಿ/ಡಿಪ್ಲೊಮೋ ಪ್ರಮಾಣಪತ್ರ, ಕರ್ನಾಟಕದಲ್ಲಿ ಕನಿಷ್ಠ 6 ವರ್ಷ ವಾಸವಿರುವ ದಾಖಲೆಗಳು ಬೇಕಾಗುತ್ತೆ. ಇನ್ನು ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಉದ್ದೇಶದಿಂದ ಇದನ್ನ ಅನುಷ್ಠಾನಗೊಳಿಸಲಾಗ್ತಿದ್ದು, 2023 ರಲ್ಲಿ ಪದವಿ/ಡಿಪ್ಲೊಮೋ ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿ ಪದವೀಧರರು ಇದರ ಲಾಭ ಪಡೆದುಕೊಳ್ಳಬಹುದು.
ಇನ್ನು ಸರ್ಕಾರಿ / ಸರ್ಕಾರಿ ಅನುದಾನಿತ ಸಂಸ್ಥೆ / ಖಾಸಗಿ ವಲಯದ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು, ಸ್ವಯಂ ಉದ್ಯೋಗ ಹೊಂದಿರುವ ಅಭ್ಯರ್ಥಿಗಳು, ವಿದ್ಯಾಭ್ಯಾಸ ಮುಂದುವರೆಸಿರುವ ಅಭ್ಯರ್ಥಿಗಳು ಇದರ ಲಾಭ ಪಡೆಯಲು ಸಾಧ್ಯ ಇಲ್ಲ. ಇನ್ನು ಮುಖ್ಯವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅಂದ್ರೆ ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಭೇಟಿ ನೀಡಬಹುದು.
ಇದನ್ನೂ ಓದಿ: ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಜಾರಿ
ಇದನ್ನೂ ಓದಿ: ಡಿಸೆಂಬರ್ 27 ರಿಂದ ಗ್ರಹಲಕ್ಷ್ಮಿ ಯೋಜನೆಯ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್