ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?

Yuva Nidhi Scheme

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24 ತಿಂಗಳ ಒಳಗೆ ಉದ್ಯೋಗ ಸಿಕ್ಕರೆ ಈ ಯೋಜನೆ ರದ್ದಾಗುತ್ತದೆ ಅಂತ ತಿಳಿಸಲಾಗಿತ್ತು.

WhatsApp Group Join Now
Telegram Group Join Now

ಇನ್ನು ಯುವಕ, ಯುವತಿ ಹಾಗೂ ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯ ಆಗಲಿದೆ ಅಂತ ಕಾಂಗ್ರೆಸ್ ಹೇಳಿತ್ತು. ಹೌದು ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ 5ನೇ ಗ್ಯಾರಂಟಿ ಯುವ ನಿಧಿ ಯೋಜನೆ ಜಾರಿಗೆ ಇದೀಗ ದಿನಗಣನೆ ಆರಂಭವಾಗಿದೆ. ಡಿಸೆಂಬರ್ 26 ರಿಂದ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಸಂಕ್ರಾಂತಿ ವೇಳೆಗೆ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಹಾಗಾದ್ರೆ ಅರ್ಜಿ ಸಲ್ಲಿಸೋದು ಹೇಗೆ ಎಲ್ಲಿ ಬೇಕಾದ ದಾಖಲೆಗಳು ಏನು ನೋಡೋಣ ಬನ್ನಿ.

ಯುವ ನಿಧಿ ಜಾರಿಗೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೌಶಲ್ಯ ಅಭಿವೃದ್ಧಿ ಸಚಿವರು ಅದಕ್ಕೆ ಬೇಕಾದ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ ಅಂತ ಡಿಕೆಶಿ ಹೇಳಿದ್ದು, ಈ ಬೆನ್ನಲ್ಲೇ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ, ಪದವೀಧರರು ಪದವಿ ಪೂರೈಸಿ 6 ತಿಂಗಳು ನಿರುದ್ಯೋಗಿಗಳಾಗಿದ್ದರೆ ಮಾಸಿಕ 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ಸಿಗಲಿದೆ ಅಂತ ಹೇಳಿದ್ದಾರೆ.

ಇನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಯೋಜನೆಗೆ ಬಜೆಟ್‌ನಲ್ಲಿ 250 ಕೋಟಿ ರೂಪಾಯಿ, ಇದನ್ನು 2023-24ನೇ ಹಣಕಾಸು ವರ್ಷಕ್ಕೆ 1,500 ಕೋಟಿ ರೂಪಾಯಿಗೆ ಮತ್ತು 2024-25ನೇ ಹಣಕಾಸು ವರ್ಷಕ್ಕೆ 2,500 ಕೋಟಿ ರೂ.ಗೆ ಹೆಚ್ಚಿಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ. ಇನ್ನು ನೋಂದಣಿ ವಿಧಾನ ಮತ್ತು ನೋಂದಣಿಗಾಗಿ ನೀಡಬೇಕಾದ ದಾಖಲೆಗಳ ಬಗ್ಗೆ ಶೀಘ್ರದಲ್ಲೇ ಸರ್ಕಾರ ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 8 ತಿಂಗಳ ಬಳಿಕ 5ನೇ ಭರವಸೆಯನ್ನು ಈಡೇರಿಸಲು ಮುಂದಾಗಿದೆ. ಮುಖ್ಯವಾಗಿ ಕೆಲವೊಂದು ದಾಖಲೆಗಳು ಇರಲೇಬೇಕು ಅಂತ ತಿಳಿದವರು ಹೇಳ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram

ಅರ್ಜಿ ಯಾವಾಗ? ಎಲ್ಲಿ ಮತ್ತು ಹೇಗೆ ಸಲ್ಲಿಸೋದು?

2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರೈಸಿದ ಹಾಗೂ ಆರು ತಿಂಗಳವರೆಗೂ ನಿರುದ್ಯೋಗಿಗಳಾಗಿರತಕ್ಕಂತ ಯುವಕ ಯುವತಿಯರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಪದವಿ ಮಾತ್ರವಲ್ಲ ಡಿಪ್ಲೋಮೋ ಮಾಡಿರ್ತಕ್ಕಂತ ವಿದ್ಯಾರ್ಥಿಗಳು ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಯೋಜನೆಯ ಲಾಭ ಪಡೆಯಲು ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಈ ಹಿಂದೆ ಡಿಸೆಂಬರ್ 21ನೇ ತಾರೀಕು ಈ ಯೋಜನೆಗೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಚಾಲನೆ ಕೊಡುತ್ತಾರೆ ಅಂತ ಹೇಳಲಾಗುತ್ತಿತ್ತು ಆದರೆ ಈಗಿನ ಮಾಹಿತಿಯ ಪ್ರಕಾರ ಡಿಸೆಂಬರ್ 26 ನೇ ತಾರೀಖಿನಂದು ಯುವನಿಧಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಇನು ಮುಖ್ಯವಾಗಿ ಯುವನಿಧಿ ಯೋಜನೆಗೆ(Yuva Nidhi Scheme) ಕರ್ನಾಟಕದವರು ಮಾತ್ರ ಅರ್ಹರು ಇದನ್ನ ಗಮನಿಸಲೇಬೇಕು.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು, ತಮ್ಮ 10ನೇ ತರಗತಿಯ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ ಹಾಗೂ ಪದವಿ ಪೂರೈಸಿದ ಅಂಕಪಟ್ಟಿ, ಆಧಾರ್ ಕಾರ್ಡ್, ಅಗತ್ಯವಿದ್ದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಖಾತೆಯ ವಿವರಗಳು, ಇವೆಲ್ಲವನ್ನ ಸ್ವಯಂ ಘೋಷಣೆಯ ಮೂಲಕ ಸಲ್ಲಿಸಬೇಕಾಗುತ್ತದೆ. ಇನ್ನು ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ದಿನಾಂಕ ನಿಗದಿಪಡಿಸಿದ್ದು ಸಾಧ್ಯವಾದಷ್ಟು ಬೇಗ ಅಭ್ಯರ್ಥಿಗಳು ಈ ಎಲ್ಲಾ ದಾಖಲಾತಿಗಳನ್ನು ಸಿದ್ದುವಾಗಿಟ್ಟುಕೊಂಡರೆ ಯೋಜನೆಗೆ ಚಾಲನೆ ಸಿಕ್ಕ ದಿನವೇ ಅಭ್ಯರ್ಥಿಗಳು ಯೋಜನೆಯ ಲಾಭ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಎಲೆಕ್ಟ್ರಿಕಲ್ ವಾಹನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್; 20ಲಕ್ಷಕ್ಕಿಂತ ಹೆಚ್ಚು ಬೆಲೆಯ ವಾಹನಗಳಿಗೆ ತೆರಿಗೆ ರದ್ಧತಿ

ಇದನ್ನೂ ಓದಿ: OPS VS NPS; ಹಳೆಯ ಮತ್ತು ಹೊಸ ಪಿಂಚಣಿ ಸ್ಕೀಮ್ ಬಗ್ಗೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು? ಹೊಸ ಪಿಂಚಣಿ ಸ್ಕೀಮ್ ಅಂದರೆ ಏನು?