ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ಪ್ರತಿ ತಿಂಗಳು ಸರ್ಕಾರ ಭತ್ಯೆ ನೀಡುತ್ತದೆ. ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. ಇನ್ನು ಸ್ವಾಮಿ ವಿವೇಕಾನಂದರ ಜಯಂತಿಯಂದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಗೆ ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಚಾಲನೆ ನೀಡುತ್ತಿದ್ದಾರೆ.
ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಹೌದು ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಪಂಚ ಗ್ಯಾರಂಟಿಯಲ್ಲಿ ಯುವ ನಿಧಿ ಯೋಜನೆ ಅನುಷ್ಠಾನ
ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಟ್ಟಿದ್ದಾರೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. ಜೊತೆಗೆ 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಅಲ್ದೇ ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ. ಹೀಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಎಸ್‍ಎಸ್‍ಎಲ್ ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಕರ್ನಾಟಕ ಯುವ ನಿಧಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಶಿಕ್ಷಣವನ್ನು ಹೊಂದಿರುವ ಉದ್ಯೋಗವಿಲ್ಲದ ಯುವಕರಿಗೆ ಆರ್ಥಿಕ ನೆರವು ನೀಡಲು ಪರಿಚಯಿಸಿದೆ. ಅರ್ಹ ಅಭ್ಯರ್ಥಿಗಳು ಈ ವ್ಯವಸ್ಥೆಯಡಿಯಲ್ಲಿ ತಮ್ಮ ಆಯ್ಕೆಮಾಡಿದ ಬ್ಯಾಂಕ್ ಖಾತೆಗಳಿಗೆ ನೇರ ಮಾಸಿಕ ಪಾವತಿಗಳನ್ನು ಪಡೆಯುತ್ತಾರೆ. ಎರಡು ವರ್ಷಗಳ ಅವಧಿಗೆ, ಕಾರ್ಯಕ್ರಮವು 1500ರೂಪಾಯಿ ಯಿಂದ 3000ರೂಪಾಯಿ ಮೊತ್ತದಲ್ಲಿ ಆರ್ಥಿಕ ಸಹಾಯವನ್ನು ನೀಡುತ್ತದೆ. ಹೀಗಾಗಿ ಅರ್ಹರು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿರುವ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ. ಅಲ್ದೇ ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಯೋಜನೆ ಅನ್ವಯಿಸುವಿದಿಲ್ಲ, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಕೂಡ ಯೋಜನೆಯ ಲಾಭ ಪಡೆಯುವಂತಿಲ್ಲ, ಅವ್ರಿಗೆ ಯೋಜನೆಯ ಲಾಭ ಸಿಗೋದಿಲ್ಲ. ಇನ್ನು ಯೋಜನೆಯ ಲಾಭ ಪಡೆಯುವವರಿಗೆ ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ. ಹೀಗಾಗಿ ಕೆಲಸ ಸಿಕ್ಕ ತಕ್ಷಣವೇ ಫಲನುಭವಿಗಳು ಸ್ವಯಂ ಘೋಷಣೆಯನ್ನ ಮಾಡಿಕೊಳ್ಳುವುದು ಉತ್ತಮ.
ಇದನ್ನೂ ಓದಿ: 3000 ರೂ.ಗಳ ರಿಯಾಯಿತಿಯೊಂದಿಗೆ Realme C 53, ವೈಶಿಷ್ಟ್ಯಗಳನ್ನು ನೋಡಿದರೆ ಇವತ್ತೇ ಖರೀದಿಸುತ್ತೀರಾ
ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗಗಳು ಖಾಲಿ; ಇಂದೇ ಅರ್ಜಿ ಸಲ್ಲಿಸಿ, ಉದ್ಯೋಗ ಪಡೆಯಿರಿ